ಕರ್ನಾಟಕದ ಜ್ಞಾನ ಪೀಠ ಪ್ರಶಸ್ತಿ ವಿಜೇತರ ಬಗ್ಗೆ ಮಾಹಿತಿ | Information About Karnataka’s Jnana Peeth Award Winners Kannada
ಕರ್ನಾಟಕದ ಜ್ಞಾನ ಪೀಠ ಪ್ರಶಸ್ತಿ ವಿಜೇತರ ಬಗ್ಗೆ ಮಾಹಿತಿ Information About Karnataka’s Jnana Peeth Award Winners in kannada
ಕರ್ನಾಟಕದ ಜ್ಞಾನ ಪೀಠ ಪ್ರಶಸ್ತಿ ವಿಜೇತರ ಬಗ್ಗೆ ಮಾಹಿತಿ
ಈ ಲೇಖನಿಯಲ್ಲಿ ಕರ್ನಾಟಕದ ಜ್ಞಾನ ಪೀಠ ಪ್ರಶಸ್ತಿ ವಿಜೇತರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ post ನಲ್ಲಿ ನೀಡಲಾಗಿದೆ.
ಜ್ಞಾನ ಪೀಠ ಪ್ರಶಸ್ತಿ
ಜ್ಞಾನಪೀಠ ಪ್ರಶಸ್ತಿಯು ಭಾರತೀಯ ಜ್ಞಾನಪೀಠದಿಂದ ವಾರ್ಷಿಕವಾಗಿ “ಸಾಹಿತ್ಯಕ್ಕೆ ಅವರ ಅತ್ಯುತ್ತಮ ಕೊಡುಗೆಗಾಗಿ” ಲೇಖಕರಿಗೆ ನೀಡುವ ಅತ್ಯಂತ ಹಳೆಯ ಮತ್ತು ಅತ್ಯುನ್ನತ ಭಾರತೀಯ ಸಾಹಿತ್ಯ ಪ್ರಶಸ್ತಿಯಾಗಿದೆ . 1961 ರಲ್ಲಿ ಸ್ಥಾಪಿಸಲಾಯಿತು, ಈ ಪ್ರಶಸ್ತಿಯನ್ನು ಭಾರತದ ಸಂವಿಧಾನ ಮತ್ತು ಇಂಗ್ಲಿಷ್ನ ಎಂಟನೇ ಶೆಡ್ಯೂಲ್ನಲ್ಲಿ ಸೇರಿಸಲಾದ ಭಾರತೀಯ ಭಾಷೆಗಳಲ್ಲಿ ಬರೆಯುವ ಭಾರತೀಯ ಬರಹಗಾರರಿಗೆ ಮಾತ್ರ ನೀಡಲಾಗುತ್ತದೆ ಮರಣೋತ್ತರ ಸಮಾಲೋಚನೆಯಿಲ್ಲ.
ಕನ್ನಡ ಶ್ರೀಮಂತ ಭಾಷೆ. ಸಾವಿರಾರು ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ. ಕನ್ನಡ ಭಾಷೆಯ ಸೌಂದರ್ಯಕ್ಕೆ ಮತ್ತು ಹಿರಿಮೆಗೆ ಮತ್ತೊಂದು ಹೆಗ್ಗಳಿಕೆ ಎಂದರೆ ಹಿಂದಿ ಭಾಷೆ ನಂತರ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುವುದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ.
ಕುವೆಂಪು(1967)
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11,1994), ಇವರು ‘ಕುವೆಂಪು’ ಎಂಬ ಕಾವ್ಯನಾಮದಿಂದ ಪ್ರಸಿದ್ಧರು. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು.
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ “ರಾಷ್ಟ್ರಕವಿ“. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. ಇವರ “ಶ್ರೀ ರಾಮಾಯಣ ದರ್ಶನಂ” ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ 1967 ರಲ್ಲಿ ‘ಜ್ಞಾನಪೀಠ ಪ್ರಶಸ್ತಿ’ಯನ್ನು ನೀಡಿ ಗೌರವಿಸಿತು. ಕುವೆಂಪುರವರು ಜಲಗಾರ, ಸ್ಮಶಾನಕುರುಕ್ಷೇತ್ರ, ಶೂದ್ರತಪಸ್ವಿ, ಬೆರಳ್ಗೆ ಕೊರಳ್, ಬಿರುಗಾಳಿ, ಯಮನ ಸೋಲು ಅವರು ರಚಿಸಿದ ಜನಪ್ರಿಯ ನಾಟಕಗಳು. ಪಾಂಚಜನ್ಯ, ಪಕ್ಷಿಕಾಶಿ, ನವಿಲು, ಮುಂತಾದುವುಗಳು ಅವರ ಕವನ ಸಂಕಲನಗಳು. ಕಾನೂರು ಸುಬ್ಬಮ್ಮ ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಮಗಳು ಎಂಬ ಕಾದಂಬರಿಗಳನ್ನೂ ಸಹ ರಚಿಸಿದ್ದಾರೆ. ‘ನೆನಪಿನ ದೋಣಿ’ ಇವರ ಆತ್ಮಕಥೆ.
ದ.ರಾ.ಬೇಂದ್ರೆ(1973)
ದತ್ತಾತ್ರೇಯ ರಾಮಚಂದ್ರ ಬೇಂದ್ರೆ (31 ಜನವರಿ 1896 – 26 ಅಕ್ಟೋಬರ್ 1981), ಜನಪ್ರಿಯವಾಗಿ ದಾರಾ ಬೇಂದ್ರೆ ಎಂದು ಕರೆಯುತ್ತಾರೆ. “ಅಂಬಿಕಾತನಯ ದತ್ತ” ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ ದ.ರಾ. ಬೇಂದ್ರೆ ಯವರು ಧಾರವಾಡದಲ್ಲಿ 1886ರ ಜನವರಿ 31ರಂದು ಜನಿಸಿದರು. “ನಾಕುತಂತಿ” ಇವರ ಕವನ ಸಂಕಲನ. ಇದಕ್ಕಾಗಿ ಬೇಂದ್ರೆಯವರಿಗೆ 1973ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿತು. ಅಂಬಿಕಾತನಯ ದತ್ತರ ಪ್ರಮುಖ ಕೃತಿಗಳೆಂದರೆ ಕೃಷ್ಣಕುಮಾರಿ, ಗರಿ, ನಾಕುತಂತಿ, ಸಖಿಗೀತ, ನಾದಲೀಲೆ, ಉಯ್ಯಾಲೆ, ಅರಳುಮರಳು,ನಾಕುತಂತಿ ಮತ್ತು ಕಾಮಕಸ್ತೂರಿ, ಹೃದಯ ಸಮುದ್ರ, ಮುಕ್ತ ಕಂಠ, ಸಂಚಯ, ಉತ್ತರಾಯಣ ಮುಂತಾದ ಕವನ ಸಂಗ್ರಹಗಳು. ಬಾಲಬೋಧೆ, ಪರಾಕಿ, ಕಾವ್ಯ ವೈಖರಿ ಮುಂತಾದ 20ಕ್ಕೂ ಅಧಿಕ ಗದ್ಯ ಬರಹ ಸಂಗ್ರಹಗಳು. ಸಾಹಿತ್ಯವಿಮರ್ಶೆ, ಸಾಹಿತ್ಯ ಸಂಶೋಧನೆ, ವಿಚಾರ ಮಂಜರಿ, ಮುಂತಾದ ಹಲವು ಸಾಹಿತ್ಯ ಗ್ರಂಥಗಳನ್ನು ರಚಿಸಿದ್ದಾರೆ.
ಶಿವರಾಮ್ ಕಾರಂತ್(1977)
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸಮೀಪದ ಕೋಟದಲ್ಲಿ ಜನಿಸಿದರು. (10 ಅಕ್ಟೋಬರ್ 1902 – 9 ಡಿಸೆಂಬರ್ 1997). ಅವರು ಕನ್ನಡ ಭಾಷೆಯಲ್ಲಿ ಕಾದಂಬರಿಕಾರರು, ನಾಟಕಕಾರರು ಮತ್ತು ಪರಿಸರ ಸಂರಕ್ಷಣಾವಾದಿಯಾಗಿದ್ದರು. ಅವರು ಕನ್ನಡಕ್ಕಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಅಲಂಕರಿಸಿದ ಮೂರನೇ ಬರಹಗಾರ.
ಇವರ ‘ಮೂಕಜ್ಜಿ ಕನಸುಗಳು’ ಕೃತಿಗೆ 1977ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಇವರು ಶ್ರೇಷ್ಠ ಕಾದಂಬರಿಕಾರ, ಕಲಾವಿದ, ಅಲೆಮಾರಿ, ಪತ್ರಕರ್ತ, ಪರಿಸರವಾದಿ, ಸಿನಿಮಾ ನಿರ್ಮಾಪಕರಾಗಿ, ನೃತ್ಯಪಟುವಾಗಿ, ಛಾಯಾಗ್ರಾಹಕರಾಗಿ ಹೀಗೆ ಸಾಹಿತ್ಯ-ಸಂಸ್ಕೃತಿಯ ಹತ್ತು ಹಲವು ಪ್ರಕಾರಗಳಲ್ಲಿ ಕೈಯಾಡಿಸಿ, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತಿಗಳಿಸಿದ್ದರು.
ಮಾಸ್ತಿ ವೆಂಕಟೇಶ್ ಅಯ್ಯಂಗಾರ್(1983)
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ 6 1891- ಜೂನ್ 6,1986) ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಂದು ಜನಿಸಿದರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.ಮಾಸ್ತಿ ಕನ್ನಡದ ಆಸ್ತಿ ಎಂದು ಪ್ರಖ್ಯಾತಿ ಹೊಂದಿದರು.ಇವರು ಸಣ್ಣ ಕಥೆಗಳ ಜನಕ ಎಂದು ಕರೆಯುತ್ತಾರೆ.‘ಸಣ್ಣಕಥೆಗಳ ಜನಕ’ ಎಂದೇ ಪ್ರಸಿದ್ಧರಾಗಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಂತೂ ‘ಮಾಸ್ತಿ ಕನ್ನಡದ ಆಸ್ತಿ’ ಎಂಬ ನುಡಿಗಟ್ಟಿಗೆ ಪಾತ್ರರಾದವರು. ಇವರಿಗೆ ಮೈಸೂರು ಅರಸರು ‘ರಾಜಸೇವಾಸಕ್ತ’ ಎಂಬ ಬಿರುದನ್ನು ನೀಡಿದರು.ಇವರ ಕಾವ್ಯ ಸಂಕಲನಗಳು ಅರುಣ, ತಾವರೆ,ನವರಾತ್ರಿ ಇತ್ಯಾದಿ.ಇತರ ಕೃತಿಗಳೆಂದರೆ ಶೇಷಮ್ಮ,ಸುಬ್ಬಣ್ಣ ಮುಂತಾದ ದೊಡ್ಡ ಕಥೆಗಳು.ಇವರ ‘ಚಿಕ್ಕ ವೀರ ರಾಜೇಂದ್ರ’ ಕೃತಿಗೆ 1983ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿತು.
ವಿ.ಕೃ.ಗೋಕಾಕ್(1990)
ವಿನಾಯಕ ಕೃಷ್ಣ ಗೋಕಾಕರು 1909 ರ ಆಗಸ್ಟ್ 9 ರಂದು ಹಾವೇರಿ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ಅವರ ತಂದೆ ಕೃಷ್ಣರಾಯರು ವಕೀಲರಾಗಿದ್ದರು. ಗೋಕಾಕರು ಸಾಹಿತ್ಯ-ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗಮನಿಸಿ ಜನತೆಯೂ, ಸರ್ಕಾರವೂ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡಿ ಸನ್ಮಾನಿಸಿವೆ. ಬಳ್ಳಾರಿಯಲ್ಲಿ ೧೯೫೮ರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.
ಡಾ.ವಿ.ಕೃ.ಗೋಕಾಕರಿಗೆ 1990 ರಲ್ಲಿ ‘ಭಾರತ ಸಿಂಧು ರಶ್ಮಿ’ ಎಂಬ ಮಹಾಕಾವ್ಯ ಭಾರತದ ಶ್ರೇಷ್ಠತಮ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಈ ಮಹಾಕಾವ್ಯವು ಎರಡು ಸಂಪುಟಗಳಲ್ಲಿದ್ದು, 12 ಖಂಡಗಳನ್ನು ಹೊಂದಿದೆ.ಸಮರಸವೇ ಜೀವನ, ಏರಿಳಿತ,ಸಮುದ್ರಯಾನ, ಮುಂತಾದವು ಇವರ ಕಾದಂಬರಿಗಳು. ಕಲೋಪಾಸಕ, ಪಯಣ, ಸಮುದ್ರಗೀತೆಗಳು ಇತ್ಯಾದಿ ಇವರ ಕವನ ಸಂಕಲನಗಳು.
ಯು.ಆರ್. ಅನಂತಮೂರ್ತಿ(1994)
ಅನಂತಮೂರ್ತಿಯವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ‘ಮೇಳಿಗೆ’ ಹಳ್ಳಿಯಲ್ಲಿ, ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ, ತಾಯಿ ಸತ್ಯಮ್ಮ (ಸತ್ಯಭಾಮ).ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.
1955ರಲ್ಲಿ ‘ಎಂದೆಂದೂ ಮುಗಿಯದ ಕತೆ’ ಎಂಬ ಕಥಾಸಂಕಲನದಿಂದ ಅವರ ಸಾಹಿತ್ಯ ಕೃಷಿ ಆರಂಭವಾಯಿತು. ಪ್ರಶ್ನೆ, ಮೌನಿ, ಆಕಾಶ ಮತ್ತು ಬೆಕ್ಕು, ಸೂರ್ಯನ ಕುದುರೆ, ಐದು ದಶಕಗಳ ಕಥೆಗಳು(ಸಮಗ್ರ) ಇವು ಇವರ ಕಥಾಸಂಕಲನಗಳು. ಸಂಸ್ಕಾರ, ಭಾರತೀಪುರ, ಅವಸ್ಥೆ, ಭವ, ದಿವ್ಯ, ಇವರ ಕಾದಂಬರಿಗಳು. ಪ್ರಜ್ಞೆ ಮತ್ತು ಪರಿಸರ, ಸನ್ನಿವೇಶ, ಸಮಕ್ಷಮ, ಪೂರ್ವಾಪರ, ಬೆತ್ತಲೆ ಪೂಜೆ ಯಾಕೆ ಕೂಡದು, ಇವುಗಳು ವಿಮರ್ಶೆಗಳು. ಹದಿನೈದು ಪದ್ಯಗಳು, ಅಜ್ಜನ ಹೆಗಲ ಸುಕ್ಕುಗಳು, ಮಿಥುನ ಇವರ ಕವನಸಂಕಲನಗಳು. ಇವರ ʼಸಮಗ್ರ ಸಾಹಿತ್ಯʼಕ್ಕಾಗಿ 1994 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿತು.
ಗಿರೀಶ್ ಕಾರ್ನಾಡ್(1998)
ಗಿರೀಶ ಕಾರ್ನಾಡ್ರು 1938 ಮೇ 19ರಂದು ಮಹಾರಾಷ್ಟ್ರದ “ಮಾಥೇರಾನ”ದಲ್ಲಿ ಜನಿಸಿದರು. ತಂದೆ ಡಾ॥ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ. ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ʼಯಯಾತಿ ʼನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು.
ಹಿಟ್ಟಿನಹುಂಜ ಮತ್ತು ಅಗ್ನಿ ಹಾಗೂ ಮಳೆ ಇವು ಪೌರಣಿಕ ನಾಟಕಗಳಾದರೆ, ತುಘಲಕ್, ತಲೆದಂಡ ಹಾಗೂ ಟೀಪುಸುಲ್ತಾನ್ ನಾಟಕಗಳು ಐತಿಹಾಸಿಕ ಹಿನ್ನಲೆಯುಳ್ಳವು. ಜಾನಪದ ವಸ್ತುಗಳನ್ನು ಒಳಗೊಂಡ ನಾಟಕಗಳು ಹಯವದನ, ನಾಗಮಂಡಲ. ಸಾಮಾಜಿಕ ನಾಟಕ ಅಂಜುಮಲ್ಲಿಗೆ, ಗಿರೀಶ್ ಕಾರ್ನಾಡ್ ರ ನಾಟಕಗಳು ಇಂಗ್ಲಿಷ್, ಹಿಂದಿ, ಮರಾಠಿ ಹಾಗೂ ಭಾರತೀಯ ಭಾಷೆಗಳಲ್ಲಿ ಪ್ರದರ್ಶನಗೊಂಡಿವೆ. ನಾಟಕಗಳ ರಚನೆಯ ಜೊತೆಗೆ ಇವರು ರಂಗಭೂಮಿಯಲ್ಲಿ ಹಾಗೂ ಚಲನಚಿತ್ರ ರಂಗಗಳಲ್ಲಿ ಅಭಿನಯ ಮತ್ತು ನಿರ್ದೇಶಕರಾಗಿ ಜನಪ್ರಿಯರಾಗಿದ್ದಾರೆ. ಇವರ ʼಸಮಗ್ರ ಸಾಹಿತ್ಯʼಕ್ಕಾಗಿ 1998 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿತು.
ಚಂದ್ರಶೇಖರ್ ಕಂಬಾರ್(2010)
ಡಾ. ಚಂದ್ರಶೇಖರ ಕಂಬಾರ (ಜನನ – ಜನವರಿ 2, 1937) ಬೆಳಗಾವಿ ಜಿಲ್ಲೆ ʼಘೋಡಿಗೇರಿʼ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ.
ಕಂಬಾರರು ರಚಿಸಿರುವ ಪ್ರಮುಖ ಕೃತಿಗಳೆಂದರೆ, ಮುಗುಳು, ಹೇಳತೇನ ಕೇಳ, ತಕರಾರಿನವರು, ಸಾವಿರದ ನೆರಳು, ಬೆಳ್ಳಿಮೀನು, ಅಕ್ಕುಕ್ಕು ಹಾಡುಗಳೆ, ಚಕೋರಿ ಇವು ಕಾವ್ಯಗಳು. ನಾಟಕಗಳು – ಬೆಂಬತ್ತಿದ ಕಣ್ಣು, ನಾರ್ಸಿಸಸ್, ಜೋಕುಮಾರ ಸ್ವಾಮಿ, ಚಾಳೇಶ, ಕಿಟ್ಟಿಯ ಕತೆ, ಜೈ ಸಿದ ನಾಯಕ, ಕಾಡು ಕುದುರೆ, ನಾಯೀ ಕತೆ ಮುಂತಾದುವು. ಕಾದಂಬರಿ – ಅಣ್ಣ ತಂಗಿ, ಕರಿಮಾಯಿ, ಜೀಕೆ ಮಾಸ್ತರ ಪ್ರಣಯ ಪ್ರಸಂಗ, ಸಿಂಗಾರೆವ್ವಾ ಮತ್ತು ಅರಮನೆ. ಜಾನಪದ- ಉತ್ತರ ಕರ್ನಾಟಕದ ಜನಪದ ರಂಗಭೂಮಿ, ಸಂಗ್ಯಾಬಾಳ್ಯಾ, ಬಣ್ಣಿಸಿ ಹಾಡವ್ವ ನನ ಬಳಗ, ಬಯಲಾಟಗಳು, ಮಾತಡೋ ಲಿಂಗವೇ ಮುಂತಾದವುಗಳು. ಇತರೆ- ಕನ್ನಡ ನಾಟಕ ಸಂಪುಟ, ನೆಲದ ಮರೆಯ ನಿದಾನ. ಇವರ ʼಸಮಗ್ರ ಸಾಹಿತ್ಯʼಕ್ಕಾಗಿ 2010ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರಕಿತು.
FAQ :
ಕನ್ನಡಕ್ಕೆ ಒಟ್ಟು ಎಷ್ಟು ಜ್ಞಾನ ಪೀಠ ಪ್ರಶಸ್ತಿ ಲಭಿಸಿದೆ?
ಎಂಟು (8)
ಕನ್ನಡಕ್ಕೆ ಮೊದಲು ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟವರು ಯಾರು?
ಕುವೆಂಪು(1967).
ಇತರೆ ವಿಷಯಗಳು :