SSP ಸ್ಕಾಲರ್ಶಿಪ್ ಗೆ ರಾಜ್ಯಾದ್ಯಂತ ಅರ್ಜಿ ಆಹ್ಹಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ.

0

ನಮಸ್ಕಾರ ಸ್ನೇಹಿತರೆ ಇದೀಗ ನಿಮಗೆ ತಿಳಿಸುತ್ತಿರುವ ವಿಷಯವೇನೆಂದರೆ, ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಅದರಂತೆ ರಾಜ್ಯದ ಎಲ್ಲಾ ಅರ್ಹ ಮತ್ತು ಸಮರ್ಥ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ವಿವಿಧ ರೀತಿಯ ವಿದ್ಯಾರ್ಥಿ ವೇತನವನ್ನು ಒದಗಿಸುವುದರ ಮೂಲಕ ಅವರಿಗೆ ಆರ್ಥಿಕ ನೆರವನ್ನು ನೀಡಲು ಮುಂದಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ನೋಡಬಹುದು.

Application Invitation for SSP Scholarship
Application Invitation for SSP Scholarship

ಎಸ್ ಎಸ್ ಪಿ ಸ್ಕಾಲರ್ಶಿಪ್ :

ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕ ವಿವಿಧ ರೀತಿಯ ಕಲ್ಯಾಣ ಇಲಾಖೆಗಳನ್ನು ಹೊಂದಿದೆ. ಭರತೆ ಎರಡು ರೀತಿಯ ವಿದ್ಯಾರ್ಥಿ ವೇತನಗಳು ಎಸ್ ಎಸ್ ಪಿ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕ ನೀಡಲಾಗುತ್ತದೆ. ಅಂದರೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಗಳು. ಒಂದರಿಂದ ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಉನ್ನತ ಶಿಕ್ಷಣದ ಗುರಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ಎಸ್ ಎಸ್ ಪಿ ಸ್ಕಾಲರ್ಶಿಪ್ ನ ಉದ್ದೇಶ :

ಆರ್ಥಿಕ ಪರಿಸ್ಥಿತಿಗಳಿಂದಾಗಿ ಕೆಲವು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾಧ್ಯವಾಗದ ಕಾರಣ ಅವರಿಗೆ ಹಣಕಾಸಿನ ನೆರವನ್ನು ನೀಡುವುದು ಎಸ್ ಎಸ್ ಪಿ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವಾಗಿದೆ. ಈ ವಿದ್ಯಾರ್ಥಿ ವೇತನದಿಂದ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಭೂತ ಹಕ್ಕು ಸಿಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳು ಸ್ವಾವಲಂಬನೆಯ ಜೀವನ ಸಾಗಿಸಬಹುದು. ಆರ್ಥಿಕ ಸ್ಥಿತಿಯ ಹುರಿತಾಗಿಯೂ ಶಿಕ್ಷಣವನ್ನು ಕರ್ನಾಟಕದ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯಲು ಸಾಧ್ಯವಾಗುತ್ತದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :

ಕರ್ನಾಟಕ ಸರ್ಕಾರವು ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನವನ್ನು ಆರಂಭಿಸಿದ್ದು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ದೊರೆಯುತ್ತದೆ.

ಇದನ್ನು ಓದಿ :ಯುವನಿಧಿ ಅರ್ಜಿಗಾಗಿ ಹೊಸ ರೂಲ್ಸ್ : ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ 3000 ಹಣ

ಎಸ್‌ಎಸ್‌ಪಿ ವಿದ್ಯಾರ್ಥಿ ವೇತನಕ್ಕೆ ಅಗತ್ಯವಾದ ದಾಖಲೆಗಳು :

ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾದರೆ ಅಗತ್ಯವಾದ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಅಭ್ಯರ್ಥಿ ಹಾಗೂ ಪೋಷಕರ ಆಧಾರ್ ಕಾರ್ಡ್, ಖಾಸಗಿ ಅಥವಾ ಸರ್ಕಾರಿ ಹಾಸ್ಟೆಲ್ ನ ಐಡಿ, ಅಭ್ಯರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಕಾಲೇಜಿನ ಶುಲ್ಕ ರಶೀದಿ, ಕಾಲೇಜು ಅಥವಾ ಸಂಸ್ಥೆಯ ನೊಂದಣಿ ಸಂಖ್ಯೆ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಮತ್ತು ಮೊಬೈಲ್ ನಂಬರ್. ಅಲ್ಲದೆ ಭಾರತ ಸರ್ಕಾರವು ಅಂಗವಿಕಲರಿಗಾಗಿ ಅನುಮೋದಿಸಿದ ಅಂಗವಿಕಲರ ಕಾರ್ಡ್ ಸಂಖ್ಯೆ. ಈ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ವೇತನಕ್ಕಾಗಿ ಎಸ್ ಎಸ್ ಪಿ ಸ್ಕಾಲರ್ಶಿಪ್ ಗಾಗಿ ಅರ್ಜಿ ಸಲ್ಲಿಸಬಹುದು.

ಹೀಗೆ ಕರ್ನಾಟಕ ಸರ್ಕಾರವು ಈ ವಿದ್ಯಾರ್ಥಿ ವೇತನವನ್ನು ಒದಗಿಸುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ, ಅವರ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು ಸಹಾಯಮಾಡುತ್ತದೆ ಎಂಬುದು ನನ್ನ ಅಭಿಪ್ರಾಯವಾಗಿದೆ. ಸರ್ಕಾರದ ಈ ವಿದ್ಯಾರ್ಥಿ ವೇತನದ ಬಗ್ಗೆ ನಿಮ್ಮ ಯಾರಾದರೂ ಸ್ನೇಹಿತರು ವಿದ್ಯಾಭ್ಯಾಸ ನಡೆಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ವಂದೇ ಭಾರತ್ ರೈಲು ಪ್ರಾರಂಭ: ಈ ರೈಲ್ವೆ ಟಿಕೆಟ್ ದರದ ಡೀಟೇಲ್ಸ್ ಇಲ್ಲಿದೆ

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿ ಆಸ್ತಿಯಲ್ಲಿ ಎಷ್ಟು ಪಾಲು ಸಿಗಲಿದೆ : ಹೈಕೋರ್ಟ್ ನಿಂದ ಮಹತ್ವದ ತೀರ್ಪು

Leave A Reply

Your email address will not be published.