ಗೃಹಲಕ್ಷ್ಮೀ ಯೋಜನೆಯ ಕಂಪ್ಲೀಟ್ ಡೀಟೇಲ್ಸ್ : ಈ ಯೋಜನೆಯಲ್ಲಿ ಮತ್ತೆ ಬದಲಾವಣೆ

0

ನಮಸ್ಕಾರ ಸ್ನೇಹಿತರೇ ನಾವು ಇಂದು ನೋಡುತ್ತಿರುವ ವಿಷಯ ಏನೆಂದರೆ ಕೆಲವು ಬದಲಾವಣೆಗಳ ಮೂಲಕ ಗೃಹಲಕ್ಷ್ಮಿ ಯೋಜನೆ ಆರಂಭವಾಗಿದೆ. ಕರ್ನಾಟಕ ರಾಜ್ಯದಲ್ಲಿ ಆರಂಭವಾದ ಕಾಂಗ್ರೆಸ್ ಸರಕಾರವು ಅನೇಕ ಯೋಜನೆಗಳನ್ನು ತರುವುದರ ಮೂಲಕ ಜನತೆಯ ಕಲ್ಯಾಣಕ್ಕೆ ಶ್ರಮಿತ್ತಿದೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ.

ಈ ಯೋಜನೆಯು ಮಹಿಳೆಯರು ಆರ್ಥಿಕವಾಗಿ ಸಬಲರಾಗಿರುವಂತೆ ಮಾಡಿ ತಮ್ಮ ಕಾರ್ಯಗಳನ್ನು ಅವರೇ ನಿರ್ವಹಿಸಿಕೊಳ್ಳುವಂತೆ ಮಾಡಲು ಸಹಾಯ ಮಾಡುತ್ತಿದೆ. ಆದರೆ ಈಗ ಆ ಯೋಜನೆಯು ಹಲವಾರು ಬದಲಾವಣೆಗಳ ಮೂಲಕ ಸಂಪೂರ್ಣವಾಗಿ ಜಾರಿಗೊಳಿಸಲು ಸಜ್ಜಾಗಿದೆ ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೋಡಬಹುದು.

GrUhakshmi Yojana New Update
GrUhakshmi Yojana New Update

ರಾಜ್ಯ ಸರ್ಕಾರದ ಪ್ರಮುಖ ಯೋಜನೆ : ಗೃಹಲಕ್ಷ್ಮೀ ಯೋಜನೆ

ರಾಜ್ಯ ಸರ್ಕಾರ ಐದು ಗ್ಯಾರೆಂಟಿ ಗಳನ್ನು ಘೋಷಿಸಿದ್ದು ಅದರಲ್ಲಿ ಗೃಹ ಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬದ ಒಬ್ಬ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಗಳು ನೀಡುವುದಾಗಿ ತಿಳಿಸಿದ್ದರು. ಅಲ್ಲದೆ ಜೂನ್ 15 ರಿಂದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಘೋಷಿಸಲಾಗಿತ್ತು. ಆದರೆ ಅರ್ಜಿಗಳನ್ನು ಸಲ್ಲಿಸುವಷ್ಟರಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಚಿಕ್ಕ ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದು,

ಗೃಹ ಲಕ್ಷ್ಮೀ ಯೋಜನೆಗೆ ಮಹಿಳೆಯರು ಅರ್ಜಿ ಸಲ್ಲಿಸಲು ಬಹಳ ಬೇಗನೆ ಅಂದರೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಆರಂಭಗೊಳಿಸಲಾಗುತ್ತದೆ. ಆದರೆ ಕೆಲವು ಬದಲಾವಣೆಗಳನ್ನು ಮಾಡಿರುವುದರಿಂದ ಆಗಸ್ಟ್ 17 ಅಥವಾ 18 ರ ಒಳಗೆಯೇ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಅವರ ಖಾತೆಗೆ ಹಣವನ್ನು ತಲುಪಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಂತಹ ಕೆಲವು ಬದಲಾವಣೆಗಳು ಯಾವುವು, ಯಾವ ಉದ್ದೇಶಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂಬ ಹಲವಾರು ಪ್ರಶ್ನೆಗಳಿಗೆ ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಲ್ಲಿ ಅದ ಮಹತ್ವದ ಬದಲಾವಣೆಗಳೆಂದರೆ :

ಪ್ರತಿ ಕುಟುಂಬದ ಮನೆಯ ಒಡತಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸುಲಭವಾಗಿ 2000 ರೂಪಾಯಿ ಹಣ ಸೇರುವಂತೆ ಮಾಡಲು ಈ ಬದಲಾವಣೆಗಳನ್ನು ಮಾಡಲಾಗಿದೆ. ಆ ಬದಲಾವಣೆ ಎಂದರೆ ಗೃಹಲಕ್ಶ್ಮಿ ಯೋಜನೆಗೆ ಮಹಿಳೆಯರು ಅರ್ಜಿ ಸಲ್ಲಿಸಲು ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಹಾಗೂ ಗ್ರಾಮ ಒನ್ ಇದರಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇವುಗಳ ಜೊತೆಗೆ ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರ ಹಾಗೂ ನಾಡ ಕಚೇರಿ ಗಳಲ್ಲಿಯೂ ಸಹ ಅವಕಾಶ ಕಲ್ಪಿಸಲಾಗಿದೆ.

ಹೀಗಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ವಲ್ಪ ಸಮಯದ ಕಾಲ ಮುದುದಲಾಗಿದೆ ಎಂದು ಚಿಕ್ಕಮಗಳೂರಿನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹಾಗಾಗಿ ಗೃಹ ಲಕ್ಷಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವೇನಾದರೂ ಕಾತುರದಿಂದ ಕಾಯುತ್ತಿದ್ದರೆ ಇನ್ನೂ ಸ್ವಲ್ಪ ಸಮಯದ ವರೆಗೆ ಕಾಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ : ಎಲ್ಲಾ ಪಿಂಚಣಿದಾರರಿಗೆ ಗುಡ್‌ ನ್ಯೂಸ್‌; ವಿಧವೆಯರಿಗೆ, ಅಂಗವಿಕಲರಿಗೆ‌, ವೃದ್ದರಿಗೆ, ಪಿಂಚಣಿ ಮೊತ್ತ ದ್ವಿಗುಣಗೊಳಿಸಿದ ಸರ್ಕಾರ!

ಅರ್ಜಿಯನ್ನು ಹೇಗೆ ಸಲ್ಲಿಸಬೇಕು :

ಸರ್ಕಾರದ ಖಾತರಿ ಯೋಜನೆಗಳ ಜಾಲತಾಣಕ್ಕೆ ಮೊದಲು ಹೋಗಿ ಅಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಆಯ್ಕೆ ಮಾಡಬೇಕು. ನಂತರ ಅರ್ಜಿಯನ್ನು ಸಲ್ಲಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ನಮೂನೆಯ ಡೆಮೊ ತೋರಿಸಲಾಗುತ್ತದೆ. ಆದರೆ ಈಗ ನೀವು ಅರ್ಜಿ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ ಅದು ಸರ್ಕಾರದಿಂದ ಅಧಿಕೃತವಾಗಿ ಘೋಷಣೆ ಮಾಡಿದ ನಂತರವೇ ಈ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೆಂದರೆ :

ಅರ್ಜಿ ಸಲ್ಲಿಸುವ ಮೊದಲು ಅರ್ಜಿ ನಮೂನೆಯಲ್ಲಿ ಆಧಾರ್ ಕಾರ್ಡ್ ಅನ್ನು ದೃಢೀಕರಣ ಮಾಡಬೇಕು ಇದರ ನಂತರವೇ ಅರ್ಜಿದಾರರ ಸಂಪೂರ್ಣ ಮಾಹಿತಿಯನ್ನು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಬೇಕು.

ಅಂದರೆ ಕುಟುಂಬದ ಯಜಮಾನಿ ಹೆಸರು, ಅವರ ವಿಳಾಸ, ಆಧಾರ್ ಕಾರ್ಡ್ ಸಂಖ್ಯೆ, ಗುರುತಿನ ಚೀಟಿಯ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ನ ಸಂಖ್ಯೆ ಹಾಗೂ ಮನೆ ಯಜಮಾನಿಯ ಬ್ಯಾಂಕ್ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು ಅಥವಾ ನೊಂದಾಯಿಸಬೇಕು.

ಈ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ಕೊನೆಯಲ್ಲಿ ಐ ಅಗ್ರೀ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬೇಕು. ಈ ಎಲ್ಲಾ ಪ್ರಕ್ರಿಯೆ ಮುಗಿದ ನಂತರ ಕೊನೆಯಲ್ಲಿ ನಮಗೆ ಒಂದು ಸ್ವೀಕೃತಿ ದೊರೆಯುತ್ತದೆ.

ಹೇಗೆ ಗೃಹ ಲಕ್ಷ್ಮೀ ಯೋಜನೆಯು ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವ ಒಂದು ಯೋಜನೆಯಾಗಿದೆ ಎಂದು ಹೇಳಬಹುದು.

ಇತರೆ ವಿಷಯಗಳು :

ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಸುಳಿವು ಕೊಟ್ಟ ಸಿದ್ಧರಾಮಯ್ಯ! ಕೊನೆಗೂ ರೈತರ ಕೈ ಹಿಡಿದ ಸರ್ಕಾರ.

ಅಡುಗೆ ಎಣ್ಣೆಯ ಬೆಲೆಯಲ್ಲಿಇಳಿಕೆ ಸಂತಸಗೊಂಡ ಜನತೆ ಭಾರಿ ಪ್ರಮಾಣದ ಬೆಲೆಇಳಿಕೆ!!

Leave A Reply

Your email address will not be published.