ಗೃಹಲಕ್ಷ್ಮಿ ಯೋಜನೆ ಅರ್ಜಿ: ಸೇವಾ ಸಿಂಧು ಬದಲು ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ

0

ನಮಸ್ಕಾರ ಸ್ನೇಹಿತರೆ, ಇಂದು ನಿಮಗೆ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಐದು ರೀತಿಯ ಗ್ಯಾರಂಟಿಗಳನ್ನು ಘೋಷಿಸಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದೆ ಎಂಬುದು ಈಗಾಗಲೇ ನಿಮಗೆ ತಿಳಿದಿದೆ. ಈ ಯೋಜನೆಗೆ ನೀವು ಮನೆಯಲ್ಲಿಯೇ ಕುಳಿತು ಅರ್ಜಿಯನ್ನು ಹೇಗೆ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

gruhalkshmi-yojana-application
gruhalkshmi-yojana-application

ಗೃಹಲಕ್ಷ್ಮಿ ಯೋಜನೆ :

ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹಲವಾರು ಮಾಹಿತಿಗಳು ತಿಳಿದು ಬರುತ್ತಿದೆ. ಅದರಂತೆ ಈಗ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಯಜಮಾನರು ಲಾಭ ಪಡೆಯಲು ಕಾತುರದಿಂದ ಕಾಯುತ್ತಿದ್ದಾರೆ. ಅದರಂತೆ ಈಗ ಕೆಪಿಸಿಸಿ ಅಧ್ಯಕ್ಷರಾದ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಕೆಲವೊಂದು ಪ್ರಮುಖ ಅಂಶಗಳ ಬಗ್ಗೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಆ ಮಹತ್ವದ ಆದೇಶ ಏನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ತಮ್ಮದೇ ಆದ ಮೊಬೈಲ್ ಫೋನ್ ಗಳನ್ನು ಬಳಸಿಕೊಳ್ಳಬಹುದು.

ಸ್ಮಾರ್ಟ್ ಫೋನಿನ ಮೂಲಕ ಅರ್ಜಿ ಸಲ್ಲಿಸಬಹುದು :

ಮನೆಯಲ್ಲಿಯೇ ಕುಳಿತು ಸ್ಮಾರ್ಟ್ ಫೋನಿನ ಮೂಲಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಈಗ ಅನು ಮಾಡಿ ಕೊಟ್ಟಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ರವರು ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಜಾರಿಯಾದ ನಂತರ ಅರ್ಜಿ ಸಲ್ಲಿಸಲು ಪ್ರತಿದಿನ ಸೇವಾ ಸಿಂಧು ಪೋರ್ಟಲ್ಲಿ 200 ಕ್ಕಿಂತ ಹೆಚ್ಚಿನ ಅರ್ಜಿಯನ್ನು ಪಡೆಯಲು ಸಾಧ್ಯವಿಲ್ಲ. ಹಾಗೆಯೇ ಸರ್ಕಾರದ ಗ್ರಾಮವನ್ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದಿದೆ. ಅಲ್ಲದೆ ಆ ಪ್ರದೇಶಗಳಲ್ಲಿ ಎರಡುವರೆ ಸಾವಿರ ಕುಟುಂಬಗಳಿರುವುದನ್ನು ನೋಡಬಹುದು. ಇದರಿಂದ ಮಹಿಳೆಯರು ಅರ್ಜಿ ಸಲ್ಲಿಸಲು ಸ್ವಲ್ಪ ಸಮಯ ಕಾಯಬೇಕಾಗುತ್ತದೆ.

ಆದ್ದರಿಂದ ಮೊಬೈಲ್ ನಲ್ಲಿಯೇ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಪ್ರಕ್ರಿಯೆ ಪಾರದರ್ಶಕವಾಗಿದ್ದರೂ ಸಹ ಸ್ವಲ್ಪ ಸಮಯ ತಡವಾಗಿ ನಡೆಯಲಿದೆ. ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಯನ್ನು ಆಹ್ವಾನ ಮಾಡಲಾಗಿದ್ದು, ಈ ಯೋಜನೆಗಾಗಿ ಪ್ರತ್ಯೇಕ ಅಪ್ಲಿಕೇಶನ್ ಅನ್ನು ನಿರ್ಮಾಣ ಮಾಡಲಾಗಿದೆ ಇದರಿಂದ ಮಹಿಳೆಯರು ತಮ್ಮ ಸ್ಮಾರ್ಟ್ಫೋನಿನಲ್ಲಿಯೇ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾಹಿತಿ ಪ್ರಕಾರ:

ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆಯ ಜಾರಿಯಾಗಲಿದ್ದು ಈ ಯೋಜನೆಗೆ ಅಜ್ಜಿಯನ್ನು ಸಲ್ಲಿಸಲು ಜೂನ್ 18ರಿಂದ ಪ್ರಾರಂಭಿಸಲಾಗುತ್ತದೆ. ಆಗಸ್ಟ್ 17 ಅಥವಾ 18ರಂದು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಮಾಡುವುದರ ಮೂಲಕ ಅಂದಿನಿಂದ ಪ್ರತಿಯೊoದು ಕುಟುಂಬದ ಯಜಮಾನರು ಈ ಯೋಜನೆಯ ಲಾಭ ಪಡೆಯಬಹುದು ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ರವರು ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ಮಾರ್ಟ್ ಫೋನಿನ ಮೂಲಕ ಅರ್ಜಿ ಸಲ್ಲಿಸಬಹುದು :

ರಾಜ್ಯ ಸರ್ಕಾರ ಜಾರಿಗೆ ತಂದಂತಹ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮವನ್, ಬೆಂಗಳೂರು ಒನ್, ಕರ್ನಾಟಕವನ್ನು ಹಾಗೂ ಆನ್ಲೈನ್ಗಳಲ್ಲಿ ಸೇವಾ ಸಿಂಧು ಪೋರ್ಟಲ್ ನ ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿಯನ್ನು ಮಹಿಳೆಯರು ಸಲ್ಲಿಸಬಹುದು.

ಇದನ್ನು ಓದಿ : ಪೆಟ್ರೋಲ್ ಡೀಸೆಲ್ ವಾಹನಗಳು ದೇಶಾದ್ಯಂತ ಬ್ಯಾನ್ ! ಈ ವಾಹನಗಳು ಜುಲೈನಲ್ಲಿ ಬರಲಿದೆ

ಗೃಹಲಕ್ಷ್ಮಿ ಯೋಜನೆಗೆ ಬೇಕಾದ ಅಗತ್ಯ ದಾಖಲೆಗಳು :

ವೋಟರ್ ಐಡಿ, ಮನೆ ಯಜಮಾನಿಯ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಈ ಅಗತ್ಯ ದಾಖಲೆಗಳ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಬಹುದಾಗಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ಈ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರನ್ನು ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಮಹತ್ವ ನೀಡಿದ್ದು, ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯು ಸಹಕಾರಿಯಾಗುತ್ತದೆ ಎಂದು ಹೇಳಬಹುದು. ಈ ಅಗತ್ಯ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಕಳುಹಿಸಿಕೊಡಿ ಧನ್ಯವಾದಗಳು.

ಇತರೆ ವಿಷಯಗಳು :

ಹೆಚ್ಚಾಗಲಿದೆ ನಂದಿನಿ ಹಾಲಿನ ದರ 5ರೂ ಕೆಎಂಎಫ್ ಅಧ್ಯಕ್ಷರು ಹೇಳೋದೇನು ..?

ಪೆಟ್ರೋಲ್ ಡೀಸೆಲ್ ವಾಹನಗಳು ದೇಶಾದ್ಯಂತ ಬ್ಯಾನ್ ! ಈ ವಾಹನಗಳು ಜುಲೈನಲ್ಲಿ ಬರಲಿದೆ

Leave A Reply

Your email address will not be published.