ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಚಿಂತೆಪಡಬೇಡಿ ಪ್ರಜಾ ಪ್ರತಿನಿಧಿ ನೇಮಕ ಮಾಡಲಾಗಿದೆ
ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ಮಹಿಳೆಯರಿಗೆ 200 ರೂಪಾಯಿಗಳನ್ನು ನೀಡುವ ಭರವಸೆಯನ್ನು ನೀಡಿತ್ತು. ಹಾಗೆ ಈ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಆಪ್ ಅನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀವು ಈಗ ನೋಡಬಹುದು.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಅರ್ಜಿ ಸಲ್ಲಿಕೆ :
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು. ಅದರಂತೆ ಈಗ ಯೋಚನೆಯನ್ನು ಸಹ ಜಾರಿಗೊಳಿಸಲು ಜುಲೈನಲ್ಲಿ ಅರ್ಜಿಯನ್ನು ಆಹ್ವಾನಿಸಲು ಪ್ರಯತ್ನಿಸುತ್ತಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ಮಹಿಳೆಗೆ ರೂ.2000ಗಳನ್ನು ನೀಡುವುದಾಗಿ ಹೇಳಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಗ್ರಾಮವನ್ ಬೆಂಗಳೂರು ಒನ್ ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವ ಕೇಂದ್ರಗಳಲ್ಲಿ ಸಲ್ಲಿಸಲು ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಅದರಂತೆ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಗಸ್ಟ್ 16ರಂದು 2,000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ :
ಮಹಿಳಾ ಮತ್ತು ಮಕ್ಕಳ ಸಸಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕಾಗಿ ನಾಲ್ಕೈದು ದಿನಗಳಲ್ಲಿ ಒಂದು ಆಪನ್ನು ಬಿಡುಗಡೆ ಮಾಡಲಾಗುತ್ತದೆ ಅದರಿಂದ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಹೀಗೆ ಆಗಸ್ಟ್ 16ರಂದು ಫಲಾನುಭವಿಗಳ ಖಾತೆಗೆ ನೇರವಾಗಿ 2000ಗಳನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಜಾಪ್ರತಿನಿಧಿಗಳ ನೇಮಕ :
ರಾಜ್ಯ ಸರ್ಕಾರ ಜಾರಿಗೆ ತರಲಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರು ಅರ್ಜಿ ಸಲ್ಲಿಸುವುದಕ್ಕಾಗಿ ಉಚಿತ ಅರ್ಜಿಗಳನ್ನು ಸಲ್ಲಿಸಲು ರಾಜ್ಯ ಸರ್ಕಾರವು ಪ್ರಜಾಪ್ರತಿನಿಧಿಗಳ ನೇಮಕವನ್ನು ಮಾಡಿದೆ. ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಉಂಟಾಗುವಂತಹ ಒತ್ತಡ ಹಾಗೂ ಅರ್ಜಿದಾರರಿಗೆ ಅನುಕೂಲವನ್ನು ಮಾಡಿಕೊಡುವ ಉದ್ದೇಶದಿಂದ ಒಂದು ಮೊಬೈಲ್ ಆಪನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪ್ರಜಾಪ್ರತಿನಿಧಿಯನ್ನು ಸರ್ಕಾರವು ನೇಮಿಸಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಪ್ರಜಾಪ್ರತಿನಿಧಿಗಳು ತಂತ್ರಜ್ಞಾನ ಅಡೆತಡೆ ಎದುರಿಸುತ್ತಿರುವವರಿಗೆ ಸಹಾಯ ಮಾಡುತ್ತಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅಲ್ಲದೆ ಪ್ರಜಾಪ್ರತಿನಿಧಿಗಳು ಫಲಾನುಭವಿಗಳ ಮನೆಗೆ ಭೇಟಿ ನೀಡುವುದರ ಮೂಲಕ ನಾಗರೀಕರ ಪರವಾಗಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಹೇಳಿದ್ದು ಈ ಅರ್ಜಿ ಸಲ್ಲಿಕೆಗಾಗಿ ಆ ಪ್ರಜಾಪ್ರತಿನಿಧಿಗಳಿಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಬದಲಾವಣೆ :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ನಲ್ಲಿ ನಮೂದಿಸಲಾದ ಯಜಮಾನಿಯು ಅರ್ಹರಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಪತಿಯ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಅನ್ನು ಹೊಂದಿರಬೇಕು ಹಾಗೂ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯೂ ಆಗಿದ್ದಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳು ಪ್ರತಿ ತಿಂಗಳು 2000ಗಳನ್ನು ಪಡೆಯಬಹುದಾಗಿದೆ.
ಹೀಗೆ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹಲವಾರು ಬದಲಾವಣೆಗಳನ್ನು ತಂದಿದ್ದು ಮಹಿಳೆಯರಿಗೆ ಅನುಕಾಲವಾಗಲು ಹೊಸ ಹೊಸ ಯೋಜನೆಗಳನ್ನು ಸಹ ಜಾರಿಗೆ ತರಲು ಮುಂದಾಗುತ್ತಿದೆ. ಹೀಗೆ ಯೋಚನೆಗೆ ಸಂಬಂಧಿಸಿದಂತೆ ಈ ಮಾಹಿತಿಯ ಉಪಯುಕ್ತವಾಗಿದೆ ಎಂದು ಭಾವಿಸುತ್ತೇನೆ ಹಾಗೂ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಸಂಬಂಧಿಕರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಖಾತೆಗೆ 2,50,000 ರೂಗಳನ್ನು ಇಂದು ಜಮಾ ಮಾಡಲಾಗುತ್ತದೆ
ಮಾರುಕಟ್ಟೆಗೆ ಹೊಸದಾಗಿ ಮತ್ತೊಂದು ಸ್ಕೂಟರ್ ಬರುತ್ತಿದೆ ಒಂದು ಬಾರಿ ಚಾರ್ಜ್ ಮಾಡಿದರೆ ಸಾಕು..!