ಗೃಹಲಕ್ಷ್ಮಿ ಯೋಜನೆ ಸೋಮವಾರ ಉದ್ಘಾಟನೆ ಯಾಗಲಿದೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

0

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹಲವಾರು ಗೊಂದಲಗಳು ಜನಸಾಮಾನ್ಯರಲ್ಲಿ ಮೂಡಿದ್ದವು. ಅದರಂತೆ ಮಕ್ಕಳ ಹಾಗೂ ಮಹಿಳಾ ಕಲ್ಯಾಣ ಇಲಾಖೆ, ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮೂಡಿದಂತಹ ಗೊಂದಲಗಳಿಗೆ ತೆರೆಯೆಳೆದಿರುವುದರ ಮೂಲಕ ಸೋಮವಾರ ಸಂಜೆ ಗೃಹಲಕ್ಷ್ಮಿ ಯೋಜನೆಯು ಉದ್ಘಾಟನೆ ಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Inauguration of Gruhalkshmi Yojana
Inauguration of Gruhalkshmi Yojana

ಅದರಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸಿಬ್ಬಂದಿಗಳೇ ನಿಮ್ಮ ಮನೆ ಹತ್ತಿರ ಬಂದು ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ಸ್ವೀಕರಿಸುತ್ತಾರೆ ಎಂದು ಹೇಳಿದ್ದಾರೆ. ಹೀಗೆ ಈ ಮಾಹಿತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ನೀವು ಇದೀಗ ನೋಡಬಹುದು.

ಗೃಹಲಕ್ಷ್ಮಿ ಯೋಜನೆ ಜಾರಿ :

ಜುಲೈ 17ರಂದು ಯುಪಿಎ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಿದ್ದಾರೆ ಎಂದು ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಿಸಿದ್ದಾರೆ. ಸೋಮವಾರ ಸಂಜೆ 5:00 ಗಂಟೆಗೆ ವಿಧಾನಸೌಧದ ಬ್ಯಾಂಕ್ ಹಾಲಿನಲ್ಲಿ ಒಂದು ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮದ ಅಡಿಯಲ್ಲಿ ಮೊಬೈಲ್ ಆಫ್ ನ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಪಾಲ್ಗೊಳ್ಳುವಿಕೆಯ ದೃಡೀಕರಣದ ಮೇರೆಗೆ ಚಾಲನೆ ನೀಡಲಾಗುತ್ತದೆ ಎಂದು ಸುದ್ದಿಯಗೋಷ್ಠಿಯನ್ನು ಉದ್ದೇಶಿಸಿ ಸಚಿವರು ಮಾತನಾಡಿದ್ದಾರೆ. ಅಲ್ಲದೆ ರಾಷ್ಟ್ರೀಯ ನಾಯಕರು ಬರದಿದ್ದರೆ ಜುಲೈ 18ರಂದು ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸಚಿವೆ ಹೇಳಿದ್ದಾರೆ.

ನೋಂದಣಿ ಕೇಂದ್ರಗಳು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಬಳಕೆಗೆ ಮೊಬೈಲ್ ಆಪನ್ನು ಬಿಡುಗಡೆ ಮಾಡಲಾಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಚುನಾಯಿತ ಪ್ರತಿನಿಧಿಗಳು, ಗ್ರಾಮವನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಬಿಬಿಎಂಪಿ ವಾರ್ಡ್ ಕಚೇರಿಯಲ್ಲಿ ಬೆಂಗಳೂರಿನ ನಾಗರೀಕರು ಹಾಗೂ ಇತರ ನಗರಗಳಲ್ಲಿ ಪೌರಕಾರ್ಮಿಕ ಕಚೇರಿಗಳಲ್ಲಿಯೂ ಸಹ ನೊಂದಣಿಯನ್ನು ಮಾಡಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕಾಗಿ 11000 ಕೇಂದ್ರಗಳಿವೆ ಹಾಗೂ ಪ್ರತಿದಿನ 6.58 ಲಕ್ಷ ಅರ್ಜಿಗಳನ್ನು ನೋಂದಾಯಿಸಿ ಕೊಳ್ಳುವುದಕ್ಕೋಸ್ಕರ ತಲಾ 30 ಸ್ಲಾಟ್ ಗಳು ಬೆಳಿಗ್ಗೆ ಮತ್ತು ಮಧ್ಯಾಹ್ನದ ಸಮಯದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ನಂದಣಿಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ ಹಾಗೂ ಯಾವುದೇ ದಿನದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು ನೋಂದಾಯಿಸಿಕೊಳ್ಳಬಹುದು ಎಂದು.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮಾಹಿತಿ :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪಡಿತರ ಚೀಟಿಯಲ್ಲಿ ನಮೂದಿಸಿರುವ ಕುಟುಂಬದ ಮಹಿಳೆ ಎಂದು ಮಾತ್ರ ಪರಿಗಣಿಸಲಾಗುತ್ತದೆ ಹಾಗೂ ಎಸ್ಎಂಎಸ್ ನ ಮೂಲಕ ನೋಂದಣಿಗೆ ಸಮಯ ಮತ್ತು ದಿನಾಂಕದ ಬಗ್ಗೆ ತಿಳಿಸಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. 1904 ಸಂಖ್ಯೆಗಳಿಗೆ ಅರ್ಜಿದಾರರು ಕರೆ ಮಾಡಬಹುದು ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಕಳುಹಿಸುವುದರ ಮೂಲಕ ತಮ್ಮ ವಿವರಗಳನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯು ಸರ್ಕಾರಿ ಉದ್ಯೋಗದಲ್ಲಿದ್ದರೆ ಹಾಗೂ ಮಹಿಳೆಯ ಪತಿಯು ತೆರಿಗೆದಾರನಾಗಿದ್ದರೆ ಅವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ.

ಇದನ್ನು ಓದಿ : ಮಾರುಕಟ್ಟೆಗೆ ಹೊಸದಾಗಿ ಮತ್ತೊಂದು ಸ್ಕೂಟರ್ ಬರುತ್ತಿದೆ ಒಂದು ಬಾರಿ ಚಾರ್ಜ್ ಮಾಡಿದರೆ ಸಾಕು..!

ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಲಿಂಕ್ :

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಾವಿರ ರೂಪಾಯಿಗಳನ್ನು ಮಹಿಳೆಯರು ಪಡೆದುಕೊಳ್ಳಲು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಲಿಂಕ್ ಆಗಿರುವ ತಮ್ಮ ನೊಂದಾಯಿತ ಬ್ಯಾಂಕ್ ಖಾತೆಗಳ ವಿವರಗಳನ್ನು ಸಲ್ಲಿಸಬೇಕಾಗುತ್ತದೆ ಅದರಿಂದ ನೇರವಾಗಿ ಮಹಿಳೆಯರ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವೆ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಹೀಗೆ ಅರ್ಜಿಗಳ ಅನುಮೋದನೆಯನ್ನು ಅಭ್ಯರ್ಥಿಗಳಿಗೆ ಎಸ್ಎಂಎಸ್ ನ ಮೂಲಕವೂ ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಹೀಗೆ ಗುರುಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ರಾಜ್ಯ ಸರ್ಕಾರವು ಮಾಡುತ್ತಿದ್ದು ಮಹಿಳೆಯರ ಬ್ಯಾಂಕ್ ಖಾತೆಗೆ ಸುಲಭವಾಗಿ ಹಣವನ್ನು ಬರುವಂತೆ ಮಾಡಲು ಸಾಕಷ್ಟು ಶ್ರಮವನ್ನು ರಾಜ್ಯ ಸರ್ಕಾರ ಹಾಕುತ್ತಿದೆ. ಈ ಯೋಜನೆಯ ಯಶಸ್ವಿಯಾಗಿ ಜುಲೈ 18ರಂದು ಜಾರಿಯಾದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಗಳು ಲಭ್ಯವಾಗುತ್ತದೆ.

ಇತರೆ ವಿಷಯಗಳು :

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಖಾತೆಗೆ 2,50,000 ರೂಗಳನ್ನು ಇಂದು ಜಮಾ ಮಾಡಲಾಗುತ್ತದೆ

Good News : ವಿದ್ಯಾರ್ಥಿಗಳಿಗೆ ಸರ್ಕಾರ ಒಂದು ಬಾರಿ ವಿನಾಯಿತಿ ನೀಡಲು ನಿರ್ಧರಿಸಿದೆ

Leave A Reply

Your email address will not be published.