ಸರ್ಕಾರದಿಂದ ರೇಷನ್ ಕಾರ್ಡ್ ಇದ್ದವರಿಗೆ ಸಿಹಿ..!ಸುದ್ದಿ ಸರ್ಕಾರದಿಂದ ಹೊಸ ವಿಧಾನ
ನಮಸ್ಕಾರ ಸ್ನೇಹಿತರೆ ಸರ್ಕಾರವು ಹಲವಾರು ಯೋಜನೆಗಳನ್ನು ಜನಸಾಮಾನ್ಯರಿಗಾಗಿ ಜಾರಿಗೆ ತರುತ್ತಿದ್ದು ಅದರಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಂತಹ ಅನ್ನಭಾಗ್ಯ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದ್ದು ಈ ಯೋಜನೆಗೆ ಜುಲೈ ತಿಂಗಳಿನಲ್ಲಿ ಸರ್ಕಾರವು ಚಾಲನೆ ನೀಡಿದೆ. ಸರ್ಕಾರವು ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಪ್ರತಿಯೊಬ್ಬರಿಗೂ ಭರವಸೆ ನೀಡಿದ್ದು ಈ ಯೋಜನೆಯನ್ನು ಯಶಸ್ವಿಯಾಗಿ ನಡೆಸಲು 5 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಹಾಗೂ 5 ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರವು ಒದಗಿಸಬೇಕಾಗಿತ್ತು.
ಆದರೆ ರಾಜ್ಯ ಸರ್ಕಾರದಲ್ಲಿ 5 ಕೆಜಿ ಅಕ್ಕಿಯನ್ನು ಕೊಡಲು ದಾಸ್ತಾನು ಇಲ್ಲದ ಕಾರಣ 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಹಣವನ್ನು ರಾಜ್ಯ ಸರ್ಕಾರವು ಎಲ್ಲರ ಖಾತೆಗೆ ಜಮಾ ಮಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀವು ನೋಡಬಹುದು.
ಅನ್ನಭಾಗ್ಯ ಯೋಜನೆ :
ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತಪಡಿತರವನ್ನು ಪ್ರತಿಯೊಬ್ಬರೂ ಸಹ ಪಡೆಯಬಹುದಾಗಿದೆ. ಹೀಗೆ ಪ್ರತಿಯೊಬ್ಬರೂ ಸಹ ಈ ಯೋಜನೆಯ ಅಡಿಯಲ್ಲಿ ಉಚಿತಪಡಿ ತರವನ್ನು ಪಡೆಯಲು ಕರ್ನಾಟಕದ ಸಿಎಂ ಆದ ಸಿದ್ದರಾಮಯ್ಯ ಅವರು ಹೊಸ ಯೋಜನೆಯೊಂದನ್ನು ಆರಂಭಿಸಿದ್ದು, ಈ ಯೋಜನೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪ್ರತಿ ಕುಟುಂಬಗಳಿಗೂ ಹೆಚ್ಚುವರಿ 5 ಕೆಜಿ ಅಕ್ಕಿ ಹಾಗೂ ಅವರ ಖಾತೆಗೆ 170ಗಳನ್ನು ನೀಡಲಾಗುತ್ತಿದೆ.
ಈ ಯೋಜನೆಯ ಅಡಿಯಲ್ಲಿ ಹಣವನ್ನು ಆ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಗೆ ಕಳುಹಿಸಲಾಗುತ್ತದೆ. 1.28 ಕೋಟಿ ಪಡಿತರ ಚೀಟಿ ಯನ್ನು ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಫಲಾನುಭವಿಗಳು ಹೊಂದಿದ್ದಾರೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಯನ್ನು ಡಿಪಿಟಿ ಮೂಲಕ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಕಳುಹಿಸಲಾಗುತ್ತದೆ.
ಅಂತ್ಯೋದಯ ಯೋಜನೆ :
1.28 ಕೋಟಿ ಪಡಿತರ ಚೀಟಿಯನ್ನು ಅಂತ್ಯೋದಯ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ರಾಜ್ಯದ ಜನತೆಯು ಹೊಂದಿದ್ದು 99ರಷ್ಟು ಜನರು ಇದರಲ್ಲಿ ಆಧಾರ್ ಸಂಖ್ಯೆಯೊಂದಿಗೆ ತಮ್ಮ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದು, ಇದಲ್ಲದೆ ಒಂದು ಪಾಯಿಂಟ್ ಸೊನ್ನೆ ಆರು ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳು ಆಧಾರ್ ಕಾರ್ಡ್ ಲಿಂಕ್ ಗೆ ಮ್ಯಾಪಿಂಗ್ ಆಗಿವೆ. ಈ ಯೋಜನೆಯಡಿಯಲ್ಲಿ ಪ್ರತಿ ಫಲಾನುಭವಿಗಳಿಗೆ 34 ರೂಪಾಯಿಗಳಂತೆ ಪ್ರತಿ ಕೆಜಿಗೆ ಹಣವನ್ನು ನೀಡಲಾಗುತ್ತದೆ.
ಇದನ್ನು ಓದಿ : ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಖಾತೆಗೆ 2,50,000 ರೂಗಳನ್ನು ಇಂದು ಜಮಾ ಮಾಡಲಾಗುತ್ತದೆ
ಎಷ್ಟು ಕುಟುಂಬಗಳು ಈ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ :
ಬಿಪಿಎಲ್ ಕಾರ್ಡ್ ಹೊಂದಿದಂತಹ 22 ಲಕ್ಷ ಕುಟುಂಬಗಳು ಅನ್ನಭಾಗ್ಯ ಯೋಜನೆಯಡಿಯಲ್ಲಿ ಇದರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಏಕೆಂದರೆ ಈ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಹಾಗೂ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವುದಿಲ್ಲ ಹಾಗಾಗಿ ಇವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಈ ಕುಟುಂಬಗಳು ಈ ಯೋಜನೆಗೆ ಸಂಬಂಧಿಸಿ ದಂತೆ ರೇಷನ್ ಕಾರ್ಡನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕು.
ಹೀಗೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಅಕ್ಕಿಯನ್ನು ನೀಡಲು ನಿರ್ಧರಿಸಿದ್ದು ಎಲ್ಲಾ ಕುಟುಂಬಗಳಿಗೂ ಸಹ ಪ್ರತಿ ತಿಂಗಳು 10 ಕೆಜಿ ಅಕ್ಕಿ ಯನ್ನು ನೀಡುವುದಾಗಿ ಘೋಷಿಸಿತ್ತು. ಅದರಂತೆ ಈಗ ದಾಸ್ತಾನು ಇಲ್ಲದ ಕಾರಣ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ನಿರ್ಧರಿಸಿದ್ದು ಜುಲೈ ತಿಂಗಳಿನಲ್ಲಿ ಎಲ್ಲರ ಖಾತೆಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೇರವಾಗಿ ಜಮಾ ಮಾಡುತ್ತಿದೆ.
ಇತರೆ ವಿಷಯಗಳು :
ಉಚಿತ ಜ್ಯೋತಿ ಪಡೆಯಲು ಇಲ್ಲಿಂದಲೇ ಅಪ್ಲೈ ಮಾಡಿ..! ಅರ್ಜಿ ಸಲ್ಲಿಸಿಲ್ಲ ಎಂದರೆ ನಿಮಗೆ ಉಚಿತ ಜ್ಯೋತಿ ಇಲ್ಲ